ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಗೆ ಬೆಳಗಾವಿ ಕ್ಷೇತ್ರದಲ್ಲಿ ಲಿಂಗಾಯತ ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮಾಜದ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಚಿಂತನೆ ಇದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
”ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಈಗಾಗಲೇ ಲೋಕಸಭೆ ಚುನಾವಣೆಗೆ ತಯಾರಿ ನಡೆದಿದೆ. ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲು ಅರ್ಜಿ ಕರೆಯಲಾಗುತ್ತದೆ. ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವರು ಅರ್ಜಿ ಸಲ್ಲಿಸಬೇಕು,” ಎಂದು ಹೇಳಿದ ಅವರು,
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
”ರಾಹುಲ್ ಜಾರಕಿಹೊಳಿ, ಮೃಣಾಲ್ ಹೆಬ್ಬಾಳ್ಕರ್ ಲೋಕಸಭೆಗೆ ಸ್ಪರ್ಧೆ ಮಾಡುವ ಬಗ್ಗೆ ಎಲ್ಲಿಯೂ ಹೇಳಿಲ್ಲ,” ಎಂದರು. ”ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಕೆಲ ಯುವಕರು ಗುಂಪು ಕಟ್ಟಿಕೊಂಡು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದಕ್ಕೆ ಪೊಲೀಸ್ ಅಧಿಕಾರಿಗಳು ಕಾರಣರಲ್ಲ,” ಎಂದರು.