ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮನೆಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದ ಹಿನ್ನೆಲೆ ಬೆಸ್ಕಾಂ ಜಾಗೃತದಳದ ತಂಡ ಭೇಟಿ ನೀಡಿ ಪರಿಶೀಲಿಸಿದೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ದೀಪಾವಳಿ ಹಬ್ಬದ ಹಿನ್ನೆಲೆ ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮನೆಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಆದರೇ, ಈ ವಿದ್ಯುತ್ ನ್ನು ಬೆಸ್ಕಾಂ ನ ವಿದ್ಯುತ್ ಕಂಬದಿಂದ ನೇರವಾಗಿ ಹಾಕಿ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಲಾಗಿತ್ತು
ಈ ಕುರಿತು ಸಾರ್ವಜನಿಕ ವಲಯದಲ್ಲಿ ಮತ್ತು ಕಾಂಗ್ರೆಸ್ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು, ಈ ಹಿನ್ನೆಲೆ ಹೆಚ್ಡಿಕೆ ನಿವಾಸಕ್ಕೆ ಬೆಸ್ಕಾಂ ಜಾಗೃತದಳದ ಐದು ಮಂದಿ ಸಿಬ್ಬಂದಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ವಿದ್ಯುತ್ ದೀಪಾಲಂಕಾರವನ್ನು ಆನ್ ಮಾಡಿಸಿ ವಿದ್ಯುತ್ ಬಳಕೆಯ ಲೆಕ್ಕಾಚಾರ ಹಾಕಿ 10 ನಿಮಿಷಕ್ಕೆ ಎಷ್ಟು ವಿದ್ಯುತ್ ಬಳಕೆ ಮಾಡಲಾಗಿದೆ ಎಂದು ರೀಡಿಂಗ್ ಪರಿಶೀಲಿಸಿದ್ದಾರೆ.