ಜೈಪುರ: ಉದಯಪುರದಲ್ಲಿ ಟೈಲರ್ (Udaipur Tailor) ಕನ್ಹಯ್ಯಾ ಲಾಲ್ (Kanhaiya Lal) ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದ ಇಬ್ಬರು ಕೊಲೆಗಡುಕರು ಬಿಜೆಪಿಯೊಂದಿಗೆ (BJP) ನಂಟು ಹೊಂದಿದ್ದಾರೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಆರೋಪಿಸಿದ್ದಾರೆ. ಜೋಧ್ಪುರದಲ್ಲಿ ಪ್ರಚಾರದ ಜಾಥಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೆಹ್ಲೋಟ್,
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಉದಯಪುರ ಘಟನೆಗೂ ಕೆಲ ದಿನಗಳ ಮೊದಲು ಬೇರೊಂದು ಪ್ರಕರಣದಲ್ಲಿ ಪೊಲೀಸರು ಇವರಿಬ್ಬರನ್ನು ಬಂಧಿಸಿದ್ದರು. ಅವರನ್ನು ಬಿಡುಗಡೆ ಮಾಡಲು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ಬಂದಿದ್ದರು ಎಂದು ಗೆಹ್ಲೋಟ್ ಗಂಭೀರ ಆರೋಪ ಮಾಡಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬದಲಿಗೆ ರಾಜಸ್ಥಾನದ ಪೊಲೀಸರ ವಿಶೇಷ ಕಾರ್ಯಾಚರಣೆಯ ತಂಡ (SOG) ಈ ಪ್ರಕರಣವನ್ನು ನಿರ್ವಹಿಸಿದ್ದರೆ ತನಿಖೆ ತಾರ್ಕಿಕವಾಗಿ ಸಾಗುತ್ತಿತ್ತು ಎಂದು ಹೇಳಿದರು.