ಬೆಂಗಳೂರು:- ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ CM ಎಚ್.ಡಿ. ಕುಮಾರಸ್ವಾಮಿ ವಿರುದ್ಧ FIR ದಾಖಲಾಗಿದೆ.
ವಿದ್ಯುತ್ ಕಳ್ಳತನದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿವಾಸಕ್ಕೆ ದೀಪಾಲಂಕಾರ ಮಾಡಲು ವಿದ್ಯುತ್ ಕಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿ ವಿಡಿಯೊ ಸಹಿತ ಟ್ವೀಟ್ ಮಾಡಿತ್ತು. ಈಗ ಬೆಸ್ಕಾಂ ಅಧಿಕಾರಿಗಳು ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೆ, ಜಯನಗರ ಬೆಸ್ಕಾಂ ಜಾಗೃತ ದಳದಿಂದ ಎಫ್ಐಆರ್ ದಾಖಲು ಮಾಡಲಾಗಿದೆ.
ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮಂಗಳವಾರ ರಂದು ಅಪರಾಧ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಎಇಇ ಪ್ರಶಾಂತ್ ಕುಮಾರ್ ಎಂಬುವವರು ದೂರು ನೀಡಿದ್ದಾರೆ. ಈ ದೂರಿನನ್ವಯ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ.