ದೊಡ್ಡಬಳ್ಳಾಪುರ:- ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ.ದೊಡ್ಡಬಳ್ಳಾಪುರ ನಗರದಲ್ಲಿ ಸರಣಿ ಬೀದಿನಾಯಿಗಳ ದಾಳಿ ಪ್ರಕರಣ ಮುಂದುವರೆದಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 14 ಮಂದಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ.
ಇಲ್ಲಿನ ಟಿಬಿ ಸರ್ಕಲ್, ತಾಲೂಕು ಕಚೇರಿ ರಸ್ತೆ, ಕೋರ್ಟ್ ರಸ್ತೆ, ಡಿ ಕ್ರಾಸ್ ಸೇರಿದಂತೆ ಹಲವು ಕಡೆ ಬೀದಿ ನಾಯಿಗಳು ದಾಳಿ ಮಾಡಿರುವುದು ವರದಿಯಾಗಿದೆ.
ರಸ್ತೆಯಲ್ಲಿ ಹೋಗುತ್ತಿದ್ದ ಮಕ್ಕಳು ಸೇರಿದಂತೆ ಪುರುಷರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ. ಸದ್ಯ ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ