ಬೆಂಗಳೂರು: ಬಿ.ವೈ.ವಿಜಯೇಂದ್ರ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಮಿತ್ ಶಾರನ್ನು ಕರೆಸಿ ದೊಡ್ಡ ಸಮಾವೇಶಕ್ಕೆ ಚಿಂತನೆ ಮಾಡಿದ್ದೇವೆ ಎಂದು ಬಿ.ವೈ.ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಒಂದು ಲಕ್ಷ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡುವ ಅಪೇಕ್ಷೆ ಇದೆ. ಮೋದಿ, ಶಾ, ನಡ್ಡಾ ಆದೇಶದಂತೆ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಕಾಣ್ತಿದೆ. ಎಲ್ಲಾ ನಾಯಕರು ವಿಜಯೇಂದ್ರಗೆ ಆಶೀರ್ವಾದ ಮಾಡಿದ್ದಕ್ಕೆ ಸಂತೋಷವಾಗಿದೆ ಎಂದರು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ನಳಿನ್ ಕುಮಾರ್ ಕಟೀಲು ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅಶೋಕ್, ಗೋವಿಂದ ಕಾರಜೋಳ, ಮುನಿರತ್ನ, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿ ಹಲವರು ಭಾಗಿಯಾಗಿದ್ದಾರೆ.