ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರು ಮತ್ತೊಂದು ಡೀಪ್ಫೇಕ್ ವಿಡಿಯೋ ವೈರಲ್ ಆಗಿದೆ. ಈ ಹಿಂದೆಯೂ ಇವರ ಇಂಥದ್ದೇ ವಿಡಿಯೋ ಶೇರ್ ಆಗಿ ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿಡಿಯೋ ಕುರಿತು ದೂರು ದಾಖಲಾಗಿದ್ದರೂ, ದುರುಳರು ಅಂಜದೇ ಮತ್ತೊಂದು ಡೀಪ್ಫೇಕ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಕುರಿತು ಅನೇಕರು ವಿರೋಧ ವ್ಯಕ್ತ ಪಡಿಸಿದ್ದಾರೆ
ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ಫೇಕ್ (Deepfake) ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಳೆದ ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.
ದೆಹಲಿ ಪೊಲೀಸರು (Delhi Police) ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. “ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವೀಡಿಯೋಗೆ ಸಂಬಂಧಿಸಿದಂತೆ, ಐಪಿಸಿಯ ಎಫ್ಐಆರ್ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ ಮತ್ತು 66 ಇ ಅನ್ನು ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ನಲ್ಲಿ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.