ದಕ್ಷಿಣದ ಖ್ಯಾತ ನಟಿ ತಮನ್ನಾ (Tamannaah) ಮತ್ತು ಬಾಲಿವುಡ್ ನಟ ವಿಜಯ್ ವರ್ಮಾ (Vijay Varma) ಲವ್ವಿಡವ್ವಿ ವಿಚಾರ ಗುಟ್ಟಿನ ಸಂಗತಿಯೇನೂ ಅಲ್ಲ. ಇಬ್ಬರೂ ಒಟ್ಟೊಟ್ಟಿಗೆ ಪ್ರವಾಸ ಮಾಡುತ್ತಿದ್ದಾರೆ, ಹಲವಾರು ಪ್ರಾಜೆಕ್ಟ್ ಗಳಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಇದೀಗ ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲು ನಿರ್ಧರಿಸಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. 2024 ಫೆಬ್ರವರಿಯಲ್ಲಿ ಅವರು ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮದುವೆ ವಿಚಾರವನ್ನು ಈ ಜೋಡಿ ಅಧಿಕೃತವಾಗಿ ಹೇಳದೇ ಇದ್ದರೂ, ಮಾಧ್ಯಮಗಳ ಜೊತೆ ಮಾತನಾಡಿರುವ ವಿಜಯ್ ವರ್ಮಾ, ‘ನನಗೆ ತಮನ್ನಾ ಮೇಲೆ ಮತ್ತಷ್ಟು ಪ್ರೀತಿಯಾಗಿದೆ (Love). ಹೆಚ್ಚೆಚ್ಚು ಪ್ರೀತಿ ಮೂಡುತ್ತಿದೆ’ ಎಂದು ಹೇಳುವ ಮೂಲಕ ತಮ್ಮಿಬ್ಬರ ನಡುವಿನ ಡೇಟಿಂಗ್ ಅನ್ನು ಖಚಿತ ಪಡಿಸಿದ್ದಾರೆ.
ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ವರ್ಮಾ ಜೊತೆ ತಮನ್ನಾ ಲಿಪ್ ಲಾಕ್ ಮಾಡಿಕೊಂಡ ವೀಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ (Dating) ವಿಚಾರವನ್ನು ತಳ್ಳಿ ಹಾಕಿದ್ದರು ತಮನ್ನಾ. ನಾವಿಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂಥ ವದಂತಿಗಳು ಎಲ್ಲಾ ಕಡೆ ಹರಿದಾಡುತ್ತಲೇ ಇರುತ್ತದೆ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಹೇಳಲ್ಲ ಎಂದಿದ್ದರು.
ಆದರೆ, ನಂತರದ ದಿನಗಳಲ್ಲಿ ಡೇಟಿಂಗ್ ಕುರಿತು ಭಿನ್ನ ಪ್ರತಿಕ್ರಿಯೆ ನೀಡಿದ್ದರು ತಮನ್ನಾ. ವಿಜಯ್ ವರ್ಮಾ ಜೊತೆ ತಾವು ಲವ್ ಮಾಡುತ್ತಿರುವ ವಿಚಾರವನ್ನು ಒಪ್ಪಿಕೊಂಡಿದ್ದರು. ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ʻಲಸ್ಟ್ ಸ್ಟೋರಿ -2′ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾ ಸೆಟ್ನಲ್ಲಿ ಮೊದಲು ಭೇಟಿಯಾಗಿದ್ದರು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿದೆ ಎಂದು ಹೇಳಿದ್ದರು. ಅದರ ಮುಂದುವರೆದ ಭಾಗವಾಗಿ ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.