ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಮನೆಯ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕದ ವಿಚಾರ ಕುರಿತು ಕಾಂಗ್ರೆಸ್ ನವರು ಬಹಳ ಕೀಳು ಮಟ್ಟದ ಟೀಕೆಗೆ ಗುರಿಮಾಡಿದ್ದರು. ಈ ಸಂಬಂಧ ಇಂದು ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರ ನೇತೃತ್ವದಲ್ಲಿ ಇಂದು ರಾಜ್ಯ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದಲ್ಲಿ ಟೀಕೆಗಳನ್ನು ಮಾಡಿಲಾಗಿದ್ದು ಹಾಗೆ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಚೇರಿಯ ಗೋಡೆಗೆ ವಿದ್ಯುತ್ ಕಳ್ಳ ಎಂದು ಕುಮಾರಸ್ವಾಮಿ ಅವರ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿದ್ದ ವಿಚಾರಕ್ಕೆ ಬೃಹತ್ ಪ್ರತಿಭಟನೆ ನಡೆಸಲಾಯಿತು
ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ʼನ ಕೀಳುಮಟ್ಟದ ರಾಜಕಾರಣ ತೋರಿಸುತ್ತದೆ ಹಾಗೆ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದಲ್ಲಿ ಟೀಕೆಗಳನ್ನು ಮಾಡಿಡ್ಡು ಮಾತ್ರ ಸರಿಯಲ್ಲ ಇದಕ್ಕೆ ಮುಂದಿನ ಲೋಕಸಭಾ ಚುನಾವಣೆ ವೇಳೆ ಸರಿಯಾದ ಪಾಠ ಕಲಿಸಬೇಕು ಹಾಗೆ ಗ್ಯಾರಂಟಿ ಹೆಸರಲ್ಲಿ ಜನರನ್ನು ಮೋಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.