ತುಮಕೂರು: ನಾನು ಸಹ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಹೈಕಮಾಂಡ್ ಒಪ್ಪಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ರಾಜಣ್ಣ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯನ್ನು ಒಮ್ಮೆ ನೋಡುವ ಆಸೆಯಿದೆ. ಇಲ್ಲಿವರೆಗೂ ರಾಜ್ಯ ರಾಜಕಾರಣದ ಅನೇಕ ಮಜುಲುಗಳ ಅನುಭವವಾಗಿದೆ, ಅನೇಕ ಸ್ಥಾನಮಾನಗಳು ದೊರೆತಿವೆ. ಇನ್ನು ಲೋಕಸಭೆಗೆ ಒಮ್ಮೆ ಕಾಲಿರಿಸುವ ಉಮೇದಿ ಇದೆ. ಇದಕ್ಕೆ ಪೂರಕವಾಗಿ ವರಿಷ್ಠರು ಒಪ್ಪಿ ಟಿಕೆಟ್ ನೀಡುವುದಾದರೆ ಸ್ಪರ್ಧಿಸುವುದಾಗಿ ಇಂಗಿತ ವ್ಯಕ್ತಪಡಿಸಿದರು.
ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾದರೆ ಆ ಮಕ್ಕಳು ಸಮಾಜದ ಆಸ್ತಿಯಾಗುತ್ತಾರೆ, ವಿದ್ಯೆ ವಂಚಿತ ಮಕ್ಕಳು ಸಮಾಜಕ್ಕೆ ಹೊರೆಯಾಗುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ವಿದ್ಯೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ, ಮಕ್ಕಳ ಬದುಕು ರೂಪಿಸುವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮುಂದಿನ ಪೀಳಿಗೆಗೆ ಶಿಕ್ಷಣವನ್ನು ಆಸ್ತಿ ರೂಪದಲ್ಲಿ ನೀಡಬೇಕು ಎಂದರು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಎಲ್ಲಾ ಮಕ್ಕಳಿಗೂ ದೇವರು ಸಮಾನ ಬುದ್ಧಿಶಕ್ತಿ ಕೊಟ್ಟಿರುತ್ತಾನೆ. ಆ ಮಕ್ಕಳಲ್ಲಿರುವ ಬುದ್ಧಿಶಕ್ತಿ, ಪ್ರತಿಭೆಯನ್ನು ಅರಳಿಸಲು ಶಿಕ್ಷಕರು, ಪೋಷಕರು ಆದ್ಯತೆ ನೀಡಬೇಕು. ಮಕ್ಕಳು ಶಿಸ್ತು, ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಯಶಸ್ಸು ಗಳಿಸಿ ಉನ್ನತ ಸ್ಥಾನಮಾನ ಪಡೆಯಬಹುದು. ಈಗ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸೌಕರ್ಯಗಳಿವೆ. ಮಕ್ಕಳು ಶಾಲೆಯಲ್ಲಿ ಅಭ್ಯಾಸ ಮಾಡುವಷ್ಟೇ ಮುಖ್ಯವಾಗಿ ಅವರು ಶಾಲೆಗೆ ಗೈರುಹಾಜರಾಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಯಲ್ಲಿ ಪಡೆಯುವ ಅಂಕಗಳಷ್ಟೇ ಶಾಲೆಯ ಹಾಜರಾತಿಯೂ ಮುಖ್ಯವಾಗುತ್ತದೆ. ಮಕ್ಕಳು ಶಾಲೆಗೆ ಗೈರು ಹಾಜರಾಗದಂತೆ ಶಿಕ್ಷಕರು, ಇಲಾಖೆ ಅಧಿಕಾರಿಗಳು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಚಿವ ಕೆ.ಎನ್.ರಾಜಣ್ಣ ಸಲಹೆ ಮಾಡಿದರು.