ಬಾಲಿವುಡ್ ಖ್ಯಾತ ನಟಿ ಮಾಧುರಿ ದೀಕ್ಷಿತ್ ರಾಜಕಾರಣಕ್ಕೆ ಪ್ರವೇಶ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಬಿಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಹಲವಾರು ನಟ ನಟಿಯರು ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಮಾಧುರಿ ರಾಜಕೀಯ ಅಖಾಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಾಧುರಿ ದೀಕ್ಷಿತ್ ಸ್ಪರ್ಧಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಬಿಜೆಪಿಯಿಂದ ಟಿಕೆಟ್ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಜೆಪಿಯ ಮುಖಂಡರು ಮಾಧುರಿಯನ್ನು ಸಂಪರ್ಕಿಸಿದ್ದಾರಂತೆ. ಅಲ್ಲದೇ, ಪುಣೆಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ ಎನ್ನಲಾಗುತ್ತಿದೆ.