ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ನವೆಂಬರ್ 25ರವರೆಗೂ ಮಳೆಯಾಗಲಿದೆ.
ಇನ್ನೂ ಕರಾವಳಿಯ ದಕ್ಷಿಣ ಕನ್ನಡದಲ್ಲೂ ಮಳೆಯಾಗುವ ನಿರೀಕ್ಷೆ ಇದೆ, ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಪುತ್ತೂರಿನಲ್ಲಿ ಮಳೆಯಾಗಿದೆ.
ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಎಚ್ಎಎಲ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.