ಮೈಸೂರು: ಪಕ್ಷ ಸಂಘಟನೆಗೆ ನನ್ನ ಮೊದಲ ಆದ್ಯತೆ. ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಗೆದ್ದು ಮೋದಿ ಕೈಬಲಪಡಿಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ.
ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ
ಯಾವಾಗ ಚುನಾವಣೆ ಬಂದರೂ ಅಧಿಕಾರಕ್ಕೆ ತರುವ ಗುರಿ ಹೊಂದಿದ್ದೇವೆ. ಮೈಸೂರು ನನಗೆ ಅವಿನಾಭಾವ ಸಂಬಂಧ ಹೊಂದಿರುವ ಜಿಲ್ಲೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ಎಂದು ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.