ಚಿತ್ರದುರ್ಗ: 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಗಳ ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಚಿತ್ರದುರ್ಗದ ಮುರುಘಾಶ್ರೀಗೆ ಇದೀಗ ಮತ್ತೆ ಬಂಧನದ ಭೀತಿ ಶುರುವಾಗಿದೆ.
ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ಅವರು ಕೋರ್ಟ್ಗೆ ಆಗಮಿಸಿದ್ದು, ಕೋರ್ಟ್ ಆದೇಶ ಪಡೆದುಕೊಳ್ಳಲಿದ್ದಾರೆ. ಬಳಿಕ ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀ ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಮತ್ತೊಂದೆಡೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಅರೆಸ್ಟ್ ವಾರೆಂಟ್ಅನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲು ಮುರುಘಾ ಶರಣರ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ.