ಶನಿವಾರ ನಡೆದ ವಾರದ ಕಥೆ ಕಿಚ್ಚನ ಜತೆ ಸಂಚಿಕೆಯಲ್ಲಿ ಬಿಗ್ಬಾಸ್ ಮನೆಯಿಂದ ಡಬಲ್ ಎಲಿಮಿನೇಷನ್ಗೆ ಮೊದಲು ತುತ್ತಾಗಿದ್ದು ಇಶಾನಿ, ಬಿಗ್ ಮನೆಯಿಂದ ಹೊರಬಿದ್ದ ಕೂಡಲೇ ಸುದೀಪ್ ಎದುರು ಬಿಕ್ಕಿ ಬಿಕ್ಕಿ ಅತ್ತರು.
ಬಿಗ್ ಬಾಸ್ ಮನೆಯೊಳಗೆ ಕಳೆದ ನೆನಪುಗಳು, ಸದಸ್ಯರ ಜತೆಗಿದ್ದ ಅನುಭವವನ್ನು ಜಿಯೋ ಸಿನಿಮಾ ನಡೆಸಿದ ಕಿರು ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಏನು ಹೇಳಬೇಕು ಗೊತ್ತಾಗ್ತಿಲ್ಲ. ಬಿಗ್ಬಾಸ್ ಮನೆಯಿಂದ ಆಚೆ ಬಂದಿದೀನಿ. 99 ಪರ್ಸೆಂಟ್ ನಾನು ಇರ್ತೀನಿ ಅಂತ ಆತ್ಮವಿಶ್ವಾಸವಿತ್ತು. ಉಳಿದ ಒಂದು ಪರ್ಸೆಂಟ್ ನನಗೆ ಆಗಲ್ಲ ಅನಿಸಿತ್ತು. ನನಗೆ ಹಟ ಜಾಸ್ತಿ ಇದೆ. ಗೇಮ್ ಆಡುವ ಅವಕಾಶ ಜಾಸ್ತಿ ಸಿಗಲಿಲ್ಲ. ಅದರಿಂದ ನನಗೆ ಬೇಜಾರಾಗಿತ್ತು. ನನ್ನನ್ನು ಯಾರೂ ಸೀರಿಯಸ್ ಆಗಿ ತಗೊಂಡಿರಲಿಲ್ಲ. ಹಾಗಾಗಿ ನನ್ನ ಸ್ಟ್ರೆಂಥ್ ತೋರಿಸಲಾಗಲಿಲ್ಲ’ ಎಂದರು.
ಮತ್ತೆ ಬಿಗ್ಬಾಸ್ಗೆ ಹೋಗುವುದು ಸಾಧ್ಯವಾದರೆ ನಾನು ನನ್ನದೇ ಲೆಕ್ಕಾಚಾರ ಇಟ್ಟುಕೊಂಡು ಆಟ ಆಡುತ್ತಿದ್ದೆ. ಯಾರು ಫೇಕ್, ಯಾರು ರಿಯಲ್ ಎಂದು ವಿಶ್ಲೇಷಿಸಿ ಮುಂದಡಿ ಇಡುತ್ತಿದ್ದೆ. ಟಾಸ್ಕ್ ವಿಷಯಲ್ಲಿಯೂ ನಾನು ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದೆ. ಏನಾದರೂ ಇರಲಿ, ನಾನು ನನಗೋಸ್ಕರ ಆಡುತ್ತಿದ್ದೆ. ಇನ್ಯಾರಿಗೋಸ್ಕರನೋ ಅಲ್ಲ. ಟೀಮ್ನಲ್ಲಿ ಆಡಬೇಕು ಅಂದರೆ ನಾನು ನನಗೋಸ್ಕರ ಆಟ ಆಡ್ತಿದ್ದೆ. ಟೀಮ್ ಗೆಲ್ಲಬೇಕು ಅಂತಲೇ ಆಟ ಆಡ್ತಿದ್ದೆ. ಇವೆರಡನ್ನೂ ಉಪಯೋಗಿಸಿಕೊಳ್ಳಲು ಫೋಕಸ್ ಮಾಡುತ್ತಿದ್ದೆ’ ಎಂದರು.