ಬೆಂಗಳೂರು:– ಭ್ರಷ್ಟಾಚಾರ ಆರೋಪದ ಹಿನ್ನೆಲೆ, ಬೆಂಗಳೂರಿನ 11 ಕಡೆ ಲೋಕಾಯುಕ್ತ ದಾಳಿ ನಡೆಸಿದ್ದು, ಭೂ ಮಾಪನ ಇಲಾಖೆ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.
ಸರ್ವೆಗಳಿಗೆ ಸಂಬಂಧಿಸಿದ ಕಡತಗಳ ವಿಲೇವಾರಿಯಲ್ಲಿನ ಅಕ್ರಮ, ಹಣಕ್ಕೆ ಬೇಡಿಕೆ ಬಗ್ಗೆ ದೂರುಗಳ ಹಿನ್ನೆಲೆಯಲ್ಲಿ ಭೂದಾಖಲೆ ನಿರ್ದೇಶಕರ ಕಚೇರಿ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಲೋಕಾಯುಕ್ತ ಕಾರ್ಯಾಚರಣೆ ಕೈಗೊಂಡಿದೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಖುದ್ದು ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ್ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲಿಸಿದೆ.
ಲೋಕಾಯುಕ್ತ ದಾಳಿ ನಡೆದ ಸ್ಥಳಗಳು
ಎಡಿಎಲ್ಆರ್, ದೊಡ್ಡಬಳ್ಳಾಪುರ
ಡಿಡಿಎಲ್ಆರ್, ಬೆಂಗಳೂರು ಗ್ರಾಮಾಂತರ, ಡಿಡಿ ಕಚೇರಿ, ದೊಡ್ಡಬಳ್ಳಾಪುರ ರಸ್ತೆ, ಚಪ್ರಕಲ್ಲು
ಎಡಿಎಲ್ಆರ್, ದೇವನಹಳ್ಳಿ
ಎಡಿಎಲ್ಆರ್, ಆನೇಕಲ್
ಎಡಿಎಲ್ಆರ್, ಕೆ.ಆರ್.ಪುರಂ
ಉತ್ತರ ವಿಭಾಗದ ಎಡಿಎಲ್ಆರ್, ಕಂದಾಯ ಭವನ
ಡಿಡಿಎಲ್ಆರ್, ಡಿಸಿ ಬೆಂಗಳೂರು ನಗರ, ಕಂದಾಯ ಭವನ
ಎಡಿಎಲ್ಆರ್, ನೆಲಮಂಗಲ
ಎಡಿಎಲ್ಆರ್ , ಹೊಸಕೋಟೆ
ಎಡಿಎಲ್ಆರ್ ದಕ್ಷಿಣ, ಕಂದಾಯ ಭವನ
ಎಡಿಎಲ್ಆರ್ ಯಲಹಂಕ
ಲೋಕಾಯುಕ್ತ ಬಿ.ಎಸ್. ಪಾಟೀಲ್ ಪ್ರತಿಕ್ರಿಯಿಸಿ, ನಗರದ ಎಲ್ಲಾ ಎಡಿಎಲ್ಆರ್ ಕಚೇರಿಗಳನ್ನು ಸರ್ಪ್ರೈಸ್ ವಿಸಿಟ್ ಮಾಡಲಾಗುತ್ತಿದೆ. ರಿಜಿಸ್ಟರ್ ಸಹ ಸರಿಯಾಗಿ ನಿರ್ವಹಣೆ ಮಾಡಿಲ್ಲ, ಸಾರ್ವಜನಿಕರ ಅರ್ಜಿಗಳನ್ನು ವಿನಾಕಾರಣ ರಿಜೆಕ್ಟ್ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಂದಿದ್ದೇವೆ. ನಿಜವಾಗಲೂ ಸಮಸ್ಯೆ ಇದ್ದರೆ, ಅರ್ಜಿಗಳನ್ನು ರಿಜೆಕ್ಟ್ ಮಾಡಬಹುದು ಎಂದು ತಿಳಿಸಿದರು.