ಜೈಪುರ:- ಕಾಂಗ್ರೆಸ್ ಪಕ್ಷ ಬುಡಸಮೇತ ಕಿತ್ತೊಗೆಯಲು ಜನತೆ ನಿರ್ಧರಿಸಿದ್ದಾರೆ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.
ರಾಜಸ್ಥಾನ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಉಸ್ತುವಾರಿ ವಹಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಚುನಾವಣೆ ಸಂದರ್ಭದಲ್ಲಿನ ಕಾಂಗ್ರೆಸ್ ನಡೆಯೊಂದನ್ನು ಟೀಕಿಸಿರುವ ಅವರು ಅದಕ್ಕೆ ಸಂಬಂಧಿಸಿದಂತೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ ಎಂದು ಅವರು ಇಂದು ಒಂದು ಜಾಹೀರಾತು ನೀಡಿದ್ದಾರೆ. ಆದರೆ ಮುಖ್ಯಮಂತ್ರಿಯ ಸಾರ್ವಜನಿಕ ಸಭೆಗೇ ಜನರು ಬರುತ್ತಿಲ್ಲ. ಐದು ವರ್ಷಗಳಿಂದ ನಿದ್ರೆ ಮಾಡುತ್ತಿರುವ ಕಾಂಗ್ರೆಸ್ ಜನರಿಗೆ ಕೊಟ್ಟ ಒಂದು ಭರವಸೆಯನ್ನು ಕೂಡ ಈಡೇರಿಸಿಲ್ಲ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಜನತೆಗೆ ಸುಳ್ಳು ಹೇಳುವುದರಿಂದ ಅಲೆ ಸೃಷ್ಟಿಸಬಹುದು ಎಂಬುದು ಕಾಂಗ್ರೆಸ್ನವರ ಯೋಚನೆ. ಆದರೆ ಜನರು ಅವರನ್ನು ಬುಡಸಮೇತ ತೊಲಗಿಸಲು ನಿರ್ಧರಿಸಿದ್ದಾರೆ ಎಂಬುದಾಗಿ ರಾಜಸ್ಥಾನ ಕಾಂಗ್ರೆಸ್ ನಡೆ ವಿರುದ್ಧ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.