ಆಗ್ರಾ:– ಉತ್ತರ ಪ್ರದೇಶದ ಮದುವೆ ಸಮಾರಂಭದಲ್ಲಿ ರಸಗುಲ್ಲಾಗಳ ಕೊರತೆಯಿಂದಾಗಿ ನಡೆದ ಮಾರಾಮಾರಿಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ಮಧ್ಯರಾತ್ರಿ ಶಂಸಾಬಾದ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದರಿಂದ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ
ಭಾನುವಾರ ಬ್ರಿಜ್ಭಾನ್ ಕುಶ್ವಾಹಾ ಅವರ ನಿವಾಸದಲ್ಲಿ ಮದುವೆ ಕಾರ್ಯಕ್ರಮವಿತ್ತು. ಸಮಾರಂಭದಲ್ಲಿ ರಸಗುಲ್ಲಾಗಳ ಕೊರತೆಯ ಬಗ್ಗೆ ವ್ಯಕ್ತಿಯೊಬ್ಬರು ಕಾಮೆಂಟ್ ಮಾಡಿದರು. ಇದು ಜಗಳಕ್ಕೆ ಕಾರಣವಾಗಿದೆ. ಈ ಜಗಳದಲ್ಲಿ ದೇವಿ, ಯೋಗೇಶ್, ಮನೋಜ್, ಕೈಲಾಶ್, ಧರ್ಮೇಂದ್ರ ಮತ್ತು ಪವನ್ ಗಾಯಗೊಂಡಿದ್ದಾರೆ. ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ ಎನ್ನಲಾಗಿದೆ.