ಕೊಲ್ಕತ್ತಾ:- ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕಂಡ ಸೋಲನ್ನು ಸಹಿಸಲಾಗದೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ವರದಿಯಾಗಿದೆ. ಬಂಕುರಾದ ಬೆಲಿಯತೋರ್ ಸಿನಿಮಾ ಹಾಲ್ ಬಳಿ ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದೆ ಎಂದು ವರದಿ ಉಲ್ಲೇಖಿಸಿದೆ. ಘಟನೆ ಇದೀಗ ಬೆಳಕಿಗೆ ಬಂದಿದ್ದು, ಮೃತ ಯುವಕನನ್ನು ರಾಹುಲ್ ಲೋಹರ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ‘ಕ್ರಿಕೆಟ್ ಹುಚ್ಚ’ ಎಂದು ಕರೆಯಲ್ಪಡುವ ರಾಹುಲ್, ಫೈನಲ್ ಪಂದ್ಯ ವೀಕ್ಷಿಸಲು ಕೆಲಸದಿಂದ ರಜೆ ತೆಗೆದುಕೊಂಡಿದ್ದರು ಎನ್ನಲಾಗಿದೆ.
ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನ್ನು ಅನುಭವಿಸಿದ ನಂತರ ಈ ಬೇಸರವನ್ನು ತಾಳಲಾರದೆ, ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಘಟನೆಯ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ’ ಎಂದು ಮೃತ ಲೋಹರ್ ಅಳಿಯ ಬಾಬು ಉತ್ತಮ್ ಸುರ್ ತಿಳಿಸಿದ್ದಾರೆ. ಮಾಹಿತಿಯ ಮೇರೆಗೆ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ಲೋಹರ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಯ ಕುರಿತು ಮಾತನಾಡಿದ ಬಂಕುರಾದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ದೋರ್ಜಿ, ‘ತನಿಖೆ ಮುಗಿಯುವವರೆಗೆ ವಿಷಯದ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ. ಸದ್ಯ ತನಿಖೆ ಮುಂದುವರೆದಿದೆ.