ತಮಿಳು ನಾಡಿನ ಹೆಸರಾಂತ ನಟ ಹಾಗೂ ಡಿಎಂಡಿಕೆ (DMDK) ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ (Captain Vijayakanth) ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಕಳೆದೆರಡು ದಿನಗಳಿಂದ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಕ್ಯಾಪ್ಟನ್ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿದೆ. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದಾರೆ.