ತೆಲಂಗಾಣ: ಪಂಚ ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ತೆಲಂಗಾಣ ರಾಜ್ಯದ ಜಗ್ತಿಯಾಲ್ನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ತೆಲಂಗಾಣ ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಶೇ. 4 ಮೀಸಲಾತಿಯನ್ನು ಪರಿಶಿಷ್ಟ ಜಾತಿ,
Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ
ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಮರು ಹಂಚಿಕೆ ಮಾಡೋದಾಗಿ ಭರವಸೆ ನೀಡಿದ್ದಾರೆ. ಎಸ್ಸಿ, ಎಸ್ಟಿ ಹಾಗೂ ಒಬಿಸಿ ಸಮುದಾಯಕ್ಕೆ ಮೀಸಲಾತಿ ಮರು ಹಂಚಿಕೆ ಮಾಡಬೇಕಿದೆ. ಹೀಗಾಗಿ, ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಲಾಗಿರುವ ಶೇ. 4 ಮೀಸಲಾತಿಯನ್ನು ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.