ಬಳ್ಳಾರಿ: ಸತೀಶ್ ಜಾರಕಿಹೊಳಿ ಸಿಎಂ ಆಗ್ತಾರೆಂದು ಶಾಸಕ ವಿಶ್ವಾಸ್ ವೈದ್ಯ ಹೇಳಿಕೆ ವಿಚಾರಕ್ಕೆ ಸಂಭಂಧಿಸಿದಂತೆ ‘ ಯಾವ ಸಮಯ ಕ್ಕೆ ಯಾರು ಸಿಎಂ ಎಂದು ಪಕ್ಷ ನಿರ್ಧರಿಸುತ್ತದೆ ಎಂದು ಬಳ್ಳಾರಿಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಒಳ್ಳೆಯ ಆಡಳಿತ ನಡೆಸಲು ಜನರು ನಮಗೆ ಅಧಿಕಾರ ಕೊಟ್ಟಿದ್ದು, ಆ ಕಡೆ ನಾವು ಹೆಚ್ಚಿನ ಗಮನ ಕೊಡಬೇಕು. ಮುಂದೆ ಯಾರು ಸಿಎಂ ಎಂದು ಪಕ್ಷ ನಿರ್ಧಾರ ಮಾಡುತ್ತದೆ. ಅಭಿವೃದ್ಧಿ ಕಡೆಗೆ ನಮ್ಮ ಗಮನ ಇದ್ದರೆ ಎಲ್ಲರಿಗೂ ಒಳ್ಳೆಯದು. ಅಧಿಕಾರದ ಬಗ್ಗೆ ಚರ್ಚೆ ಮಾಡಿದ್ರೆ ಜನರಿಗೆ ಯಾವ ಲಾಭ ಇಲ್ಲ ಎಂದರು.