ಮಂಗಳೂರು:– ಕೆಲವೇ ದಿನಗಳಲ್ಲಿ 30-40 ಶಾಸಕರು ಕಾಂಗ್ರೆಸ್ನಿಂದ ಹೊರಬರಲಿದ್ದಾರೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಟೀಮ್ ಡಿವೈಡ್ ಆಗಿದೆ. ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಪಟ್ಟಕ್ಕೆ ಬೇಡಿಕೆ ಇಡುತ್ತಿದ್ದಾರೆ. ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗುತ್ತಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಗೆ ಬರ್ತಾರೆ ಎಂದು ಅವರು ಹೇಳಿದರು.
ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್ ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ. ಈ ಭಯದಿಂದ ಕಾಂಗ್ರೆಸ್ ನವರು ಬಿಜೆಪಿಯಿಂದ ಹಲವಾರು ಮಂದಿ ಬರ್ತಾರೆ ಎಂದು ದಾರಿ ತಪ್ಪಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಯಾರೂ ಹೋಗ್ತಾ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ʻʻಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವೆಲ್ಗಳು ಬಿದ್ದಿವೆ. ಸತೀಶ್ ಜಾರಕಿಹೊಳಿ, ಜಿ. ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಸಿಎಂ ಹುದ್ದೆಗಾಗಿ ಹೋರಾಟ ಮಾಡುವ ಕಾರಣ ಸರ್ಕಾರ ಬೀಳಬಹುದು ಎಂದು ನಳಿನ್ ಕುಮಾರ್ ಕಟೀಲ್ ಆಶಾವಾದ ವ್ಯಕ್ತಪಡಿಸಿದರು.