ಮಂಡ್ಯ: ಬಾಯ್ಲರ್ ಬೆಲ್ಟ್ಗೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ರಾಕೇಶ್ (22) ಮೃತ ದುರ್ದೈವಿಯಾಗಿದ್ದು, ಇತ್ತೀಚೆಗಷ್ಟೇ ಕೆಲಸಕ್ಕೆ ಸೇರಿದ್ದ ರಾಕೇಶ್ ನಿನ್ನೆ ನೈಟ್ ಶಿಫ್ಟ್ ಕೆಲಸದಲ್ಲಿದ್ದರು.
ಇಂದು ಬೆಳಿಗ್ಗೆ ಬೂದಿ ತೆಗೆಯುವ ಮಷೀನ್ ಬೆಲ್ಟ್ಗೆ ಸಿಲುಕಿ ಮೃತಪಟ್ಟಿದ್ದಾರೆ. ತಕ್ಷಣವೇ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಇನ್ನೂ ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.