ಗದಗ: ನ. 25 ರಂದು ಗದಗ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆ ಆಯೋಜನೆ ಮಾಡ ಲಾಗಿದೆ ಎಂದು ಗದಗ ನಗರದ ಪತ್ರಿಕಾ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವದ ಉಪನಿರ್ದೆಶಕ ಡಾ. ಕೃಷ್ಣಪ್ಪ ಸುದ್ದಿಗೋಷ್ಠಿ ನಡೆಸಿ ಹೇಳಿದರು. ಬೆಳಿಗ್ಗೆ 10 ಘಂಟೆಗೆ ಪ್ರಾರಂಭವಾಗಲಿರೋ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಯಾಗಿದ್ದು, ಮಧ್ಯಾನ್ಹ 3 ಘಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಸಂಸದೀಯ ವ್ಯವಹಾರಗಳ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ, ನರೇಗಲ್ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಾಡಲಾಗಿದ್ದು,
32 ಜಿಲ್ಲೆಗಳ ಒಟ್ಟು 64 ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಲಿರೋ ಹಾಲಕೆರೆ ಅನ್ನದಾನೇಶ್ವರ ಮಠದ ಶ್ರೀ. ಮ.ನಿ.ಪ್ರ. ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು. ವಿ.ಪ. ಸಭಾಪತಿ ಬಸವರಾಜ ಹೊರಟ್ಟಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಘನ ಉಪಸ್ಥಿತಿರಿರದ್ದಾರೆ. ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ವಿ. ಪ. ಸದಸ್ಯರು, ಲೋಕಸಭಾ ಸದಸ್ಯರು ಸೇರಿ ವಿವಿಧ ಗಣ್ಯರು ಅತಿಥಿಗಳಾಗಿ ಭಾಗಿಯಾಗಿದ್ದಾರೆ ಎಂದು ಡಾ. ಕೃಷ್ಣಪ್ಪ ಹೇಳಿದರು.