ಬೆಂಗಳೂರು: ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಇರುವ ಹಿರಿಯ ನಟಿ ಲೀಲಾವತಿ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಚಿರತೆ ಕಾಣಿಸಿಕೊಂಡಿದೆ.
ಸೋಲದೇವನಹಳ್ಳಿ, ಬಾಣಸವಾಡಿ, ಆಗಳಗುಪ್ಪೆ, ಚೋಡಸಂದ್ರ, ಹಂದಿಗುಟ್ಟೆ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಹೀಗೆ ನೋಡ್ತಾ ಇರಿ AIN ನ್ಯೂಸ್ …..