ಮಂಗಳೂರು: ಐದಾರು ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ ಎಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಹೇಳಿದರು. ಇದು ರೈತ ವಿರೋಧಿ ಸರ್ಕಾರ, ಬರಗಾಲ ಇದ್ದರೂ ಜವಾಬ್ದಾರಿ ಇಲ್ಲ. ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲ ಸಂಪೂರ್ಣ ವಿಫಲವಾಗಿದೆ.
ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು
ಒಬ್ಬ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಬರ ಪ್ರವಾಸ ಮಾಡಿಲ್ಲ. ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡುತ್ತೆ ಅಂತಾ ಭಾವಿಸಿದ್ದೆವು. ಆದರೆ ನಿನ್ನೆ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಬೇರೆ ಚರ್ಚೆ ಆಗಿದೆ. ಬರದ ಬದಲು ಲೋಕಸಭಾ ಚುನಾವಣೆ ಗೆಲ್ಲುವ ಬಗ್ಗೆ ಚರ್ಚೆ ಆಗಿದೆ ಎಂದು ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದರು.