ಮೈಸೂರು.:- ಎಸ್ಸಿಪಿ/ಟಿಎಸ್ಪಿ ಅನುದಾನ ಅರ್ಹ ಫಲಾನುಭವಿಗಳಿಗೆ ಸಂಪೂರ್ಣವಾಗಿ ಬಳಕೆ ಆಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಎಸ್.ಸಿ.ಪಿ/ಟಿ.ಎಸ್.ಪಿ ಅನುಧಾನ ಬಳಕೆ ಕುರಿತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿದೆಯೇ ಎಂಬುದನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ರ್ಯಾಂಡಮ್ ಆಗಿ ಪರಿಶೀಲಿಸಿ ವರದಿ ನೀಡಬೇಕು ಎಂದರು.
ಹಾಸ್ಟೆಲ್ಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ಗಳಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಬೇಕು. ಎಸ್ಸಿಪಿ/ಟಿಎಸ್ಪಿ ಅಡಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟವನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪರಿಶೀಲಿಸಬೇಕು ಎಂದು ತಿಳಿಸಿದರು. ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗುವುದು ಎಂದರು.
ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಆಶಾದ್ ಉರ್ ರೆಹಮಾನ್ ಶರೀಫ್, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರಾದ ನಾಜಿಯಾ ಸುಲ್ತಾನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.