ಬೆಂಗಳೂರು:- ಸಚಿವ ಜಮೀರ್ ರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸ್ಪೀಕರ್ ಸ್ಥಾನದಲ್ಲಿ ಕುಳಿತ ವ್ಯಕ್ತಿಗೆ ಒಂದು ಜಾತಿ, ಧರ್ಮದ ಬಣ್ಣ ಕೊಡುವ ಕೆಲಸ ಮಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕು. ಇಲ್ಲವಾದರೆ ಅವರು ಮುಂದಿನ ಅಧಿವೇಶನದಲ್ಲಿ ಹೇಗೆ ಪಾಲ್ಗೊಳ್ಳುತ್ತಾರೋ ನೋಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲು ಹಾಕಿದ್ದಾರೆ