ಬೆಳಗಾವಿ :-ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕನಾಗಿ ಆರ್.ಅಶೋಕ ನೇಮಕ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ನಾವು ಅಳೆದು, ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ.
ಹೊಂದಾಣಿಕೆ ಮಾಡಿಕೊಳ್ಳುವವರಿಗೆ ಕಾಲ ಇದು. ಅಧ್ಯಕ್ಷರು, ಪ್ರತಿಪಕ್ಷ ನಾಯಕರು ವಿರೋಧ ಪಕ್ಷಗಳ ಜೊತೆಗೆ ಹೊಂದಾಣಿಕೆ ಇದೆ. ಅಂಥ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಬಂದಿದೆ. ಈ ಹೊಂದಾಣಿಕೆಯಿಂದ ಲೋಕಸಭೆ ಚುನಾವಣೆಯಲ್ಲಿ ಜಾಸ್ತಿ ಸ್ಥಾನ ಗೆಲ್ಲಿಸುತ್ತಿರಬಹುದು. ಅದಕ್ಕಾಗಿ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇಮಕ ಮಾಡಿದ್ದಾರೆಂದು ತಿಳಿಸಿದರು.