ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಹೆಣ್ಮಕ್ಕಳಿಗೆ ಎಷ್ಟು ಸೇಫ್ ಅನ್ನೋ ಪ್ರಶ್ನೆ ಪದೇ ಪದೇ ಹುಟ್ಟಿಕೊಳ್ತಿದೆ. ಯಾಕೆಂದ್ರೆ ನಗರದಲ್ಲಿ ದಿನದಿಂದ ದಿನಕ್ಕೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗ್ತಿದ್ದು ಹಣ್ಣು ಮಕ್ಕಳಲ್ಲಿ ಆತಂಕ ಹೆಚ್ಚಿಸಿದೆ. ಕಳೆದ ಕೆಲ ದಿನಗಳ ಹಿಂದೆ ಲುಲೂ ಮಾಲ್ ನಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ ಮಾಡಿದ ವಿಚಾರ ಇನ್ನೂ ಮರೆಯಾಗಿಲ್ಲ. ಅಷ್ಟರಲ್ಲಾಗಲೇ ಬೆಂಗಳೂರು ಮೆಟ್ರೋದಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದುಹೋಗಿದೆ.
ಮಹಿಳೆಯೊಬ್ಬರು ಮಧ್ಯರಾತ್ರಿ ನಿರ್ಭೀತಗಳಾಗಿ ಓಡಾಡಿದಾಗ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಬಂದಂತಾಗುತ್ತದೆ ಎಂದು ರಾಷ್ಟ್ರಪಿತ ಮಹಾತ್ಮಗಾಂಧಿ ಹೇಳಿದ್ರು. ಆದ್ರೆ ಹೆಣ್ಣು ಒಬ್ಬಂಟಿಯಾಗಿ ರಾತ್ರಿ ಓಡಾಡೋದಿರಲಿ. ಹಗಲು ಓಡಾಡೋದೆ ಕಷ್ಟ ಎಂಬಂತಾಗಿದೆ. ಸಾರ್ವಜನಿಕ ನ ಸ್ಥಳಗಳಲ್ಲಿ ಹೆಣ್ಣು ಒಂಟಿಯಾಗಿದ್ರೂ ಗುಂಪಲ್ಲಿದ್ರೂ ಅಶ್ಲೀಲ ಮಾತು ಲೈಂಗಿಕ ದೌರ್ಜನ್ಯ ಎದುರಿಸಬೇಕಾಗ್ತಿದೆ. ರಾತ್ರಿ ಮಾತ್ರವಲ್ಲ. ಹಗಲು ಹೊತ್ತಿನಲ್ಲೇ ಮಹಿಳೆಯರ ಮೇಲೆ ಅಸಭ್ಯ ವರ್ತನೆ ತೋರಲಾಗ್ತಿದೆ
ಹೌದು… ಕಳೆದ ಕೆಲ ದಿನಗಳ ಹಿಂದೆ ನಗರದ ಲುಲುಮಾಲ್ ನಲ್ಲಿ ನಡೆದಿದ್ದ ಲೈಂಗಿಕ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಲೈಂಗಿಕ ಕಿರುಕುಳ ಘಟನೆ ನಡೆದಿದೆ. ತುಂಬಿ ತುಳುಕುತ್ತಿದ್ದ ಮೆಟ್ರೋ ರೈಲಿನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು ಕಿಡಿಗೇಡಿ ಕೃತ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣ ರೆಡಿಟ್ ನಲ್ಲಿ ವಿಚಾರ ಬಹಿರಂಗವಾವಗಿದ್ದು , ಕೂಡಲೇ ತಪ್ಪಿತಸ್ಥೃ ವಿರುದ್ದ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನ ಒತ್ತಾಯಿಸಿದ್ದಾರೆ.
ನಿನ್ನೆ ಬೆಳಗ್ಗೆ ಸುಮಾರು 8.30ರ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಸದಾ ಜನಜಂಗುಳಿಯಿಂದ ಇರುವ ಮೆಜೆಸ್ಟಿಕ್ ಮೆಟ್ರೋದಲ್ಲಿ ಈ ಘಟನೆ ಮುನ್ನೆಲೆಗೆ ಬಂದಿದೆ. ಕಾಲೇಜು ತೆರಳುತ್ತಿದ್ದ ಯುವತಿಗೆ ಮೆಟ್ರೋದಲ್ಲಿ ಕೆಟ್ಟ ಅನುಭವವಾಗಿದೆ.ಅಂದಹಾಗೆಯೇ ಯುವತಿ ಪ್ರತಿ ದಿನ ಕಾಲೇಜಿಗೆ ಬಸ್ನಲ್ಲೇ ತೆರಳುತ್ತಿದ್ದಳು. ಆದರೆ ಸೋಮವಾರ ಬೆಳಿಗ್ಗೆ 8.30ರ ಸುಮಾರಿಗೆ ಮೆಟ್ರೋದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್ಗೆ ಬಂದಿದ್ದಳು. ಮೆಟ್ರೋ ಏರುವಾಗ ದಟ್ಟಣೆಯಿತ್ತು, ಮೆಟ್ರೋ ಹತ್ತಿದ ನಂತರ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಸ್ಪರ್ಶಿಸಿದ್ದಾನೆ.ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಅರಿವಾದಾಗ ಸಹಾಯ ಕೋರಿದ್ದರೂ ಮೆಟ್ರೋ ಸಹಪ್ರಯಾಣಿಕರು ನೆರವಿಗೆ ಬಂದಿರಲಿಲ್ಲವಂತೆ. ಯುವತಿ ಅಳುತ್ತಾ, ಕಿರುಚುತ್ತಾ ಇದ್ದರು ಯಾರು ಆಕೆಯ ಸಹಾಯಕ್ಕೆ ಬರಲಿಲ್ಲ. ಹೀಗಾಗಿ ಈ ವಿಚಾರವನ್ನು ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣವಾದ ರೆಡ್ಇಟ್ನಲ್ಲಿ ಬಹಿರಂಗ ಪಡಿಸಿದ್ದಾರೆ. ಈ ಸಂಬಂಧ BMRCL ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸೆ. 9ರಂದು ನಗರದ ಕಾಲೇಜೊಂದರ 20 ವರ್ಷದ ವಿದ್ಯಾರ್ಥಿನಿ, ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದ್ದರು. ಕಳೆದ ಕೆಲವು ದಿನಗಳ ಹಿಂದೆ ಪ್ರಯಾಣಿಕರೊಬ್ಬರ ಪರ್ಸ್ ಸಹ ಕಳವು ಆಗಿತ್ತು. ಈ ಘಟನೆ ಕುರಿತು ಇದುವರೆಗೂ ಯಾರೂ ದೂರು ನೀಡಿಲ್ಲ. ನಿನ್ನೆ ರಾತ್ರಿವರೆಗೂ ಯಾವುದೇ ದೂರು ದಾಖಲಾಗಿಲ್ಲ. ದೂರು ನೀಡಿದರೆ ತಕ್ಷಣವೇ ಸಿಸಿ ಟಿ.ವಿ ಕ್ಯಾಮೆರಾ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ
ಮೆಟ್ರೋ ಸೇಫ್ ಅಂತ ಸಾಕಷ್ಟು ಹಣ್ಣು ಮಕ್ಕಳು ಮೆಟ್ರೋ ಹತ್ತುತ್ತಾರೆ. ಆದ್ರೆ ಇದೀಗ ಇದೇ ಮೆಟ್ರೋದಲ್ಲಿ ಲೈಂಗಿಕ ಕಿರುಕುಳ ಕೇಸ್ ದಾಖಲಾಗಿದೆ. ಮೆಟ್ರೋದಲ್ಲಿ ತಿಂಡಿ ತಿಂದರೂ ನೀರು ಕುಡಿದರೂ ಪೈನ್ ಹಾಕುವ ಅಧಿಕಾರಿಗಳು ಈ ಪ್ರಕರಣವನ್ನ ಎಷ್ಟರ ಮಟ್ಟಿಗೆ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ತಾರೆ ಅನ್ನೋದನ್ನ ಕಾದುನೋಡಬೇಕಿದೆ