ಮಂಗಳೂರು: ” ಅಧಿವೇಶನದ ಸ್ಪೀಕರ್ ಬಗ್ಗೆ ಹೇಳಿಕೆ ಕೊಟ್ಟಿರುವ ಸಚಿವ ಜಮೀರ್ ಅವರನ್ನು ರಸ್ತೆಯಲ್ಲಿ ಓಡಾಡಲು ಬಿಟ್ಟಿರುವುದೇ ಅಪರಾಧ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಜಮೀರ್ ಅವರ ರಾಜೀನಾಮೆ ಪಡೆಯಬೇಕು. ಇಲ್ಲವಾದರೆ ನಾವು ಹೋರಾಟ ನಡೆಸುತ್ತೇವೆ ” ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.
ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ರನ್ನು ರಸ್ತೆಯಲ್ಲಿ ಓಡಾಡಲು ನಾವು ಬಿಟ್ಟಿರೋದೇ ಹೆಚ್ಚು, ಸ್ಪೀಕರ್ ಸ್ಥಾನಕ್ಕೆ ಜಾತಿ ಧರ್ಮದ ಬಣ್ಣ ಹಚ್ಚಿ ತಲೆ ತಗ್ಗಿಸುವ ಕೆಲಸ ಮಾಡಿದ್ದಾರೆ. ಇಷ್ಟು ಹೊತ್ತಿಗೆ ಅವರಿಂದ ಸಿಎಂ ರಾಜಿನಾಮೆ ತೆಗೆದುಕೊಳ್ಳಬೇಕಿತ್ತು. ಮುಂದಿನ ಅಧಿವೇಶನದಲ್ಲಿ ಹೇಗೆ ಭಾಗವಹಿಸುತ್ತಾರೆ ನೋಡುತ್ತೇವೆ. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ ಕಂಬಳ: ಹೇಗಿದೆ ಸಿದ್ಧತೆ!
ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಅದನ್ನು ನಿಭಾಯಿಸಲು ಸರಕಾರ ವಿಫಲವಾಗಿದೆ. ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಿಲ್ಲ, ಅಧಿಕಾರಿಗಳ ಸಭೆ ಕೂಡ ಕರೆದಿಲ್ಲ. ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಬರದ ವಿಚಾರ ಮಾತನಾಡದೆ ಲೋಕಸಭಾ ಚುನಾವಣೆ ಗೆಲ್ಲುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.