ಧಾರವಾಡ: ದೆಹಲಿಯಲ್ಲಿ ನಡೆದ ರೈತ ಹೋರಾಟದ ನೆನಪಿಗೋಸ್ಕರ ವಿವಿಧ ಹಕ್ಕುಗಳಿಗಾಗಿ ಬೆಂಗಳೂರಿನಲ್ಲಿ ಮಹಾಧರಣಿ ನಡೆಸಲು ಸಂಯುಕ್ತ ಹೋರಾಟಗಳ ಸಮಿತಿ ಸಜ್ಜಾಗಿದೆ. ಈ ಹೋರಾಟದ ಪೋಸ್ಟರ್ಗಳನ್ನು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರು ಇಂದು ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ರೈತರು, ಹಿಂದುಳಿದ ವರ್ಗದವರು, ವಿದ್ಯಾರ್ಥಿಗಳು, ಯುವಜನರು ಹಾಗೂ ಮಹಿಳಾ ಸಂಘಟನೆಗಳನ್ನೊಳಗೊಂಡು 72 ಗಂಟೆಗಳ ಕಾಲ ಈ ಹೋರಾಟ ನಡೆಯಲಿದೆ. ನ.26 ರಿಂದ 28ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಈ ಮಹಾಧರಣಿ ನಡೆಯಲಿದೆ ಎಂದು ಹಿರೇಮಠ ಈ ಸಂದರ್ಭದಲ್ಲಿ ತಿಳಿಸಿದರು.
Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ ಕಂಬಳ: ಹೇಗಿದೆ ಸಿದ್ಧತೆ!
ದೆಹಲಿಯಲ್ಲಿ ಬೇರೆ ಬೇರೆ ರಾಜ್ಯಗಳ ರೈತರು ನಡೆಸಿದ ಧರಣಿಯ ನೆನಪನ್ನು ಮುಂದಿಟ್ಟುಕೊಂಡು ರಾಜ್ಯದ ಜನರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಈ ಮಹಾಧರಣಿ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ರಾಜಭವನ ಚಲೋ ಚಳವಳಿಯನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಹಿರೇಮಠ ತಿಳಿಸಿದರು.