ದೊಡ್ಡಬಳ್ಳಾಪುರ: ಹಳೇ ದ್ವೇಷದ ಹಿನ್ನೆಲೆ ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ರೈಲ್ವೆ ಸ್ಟೇಷನ್ ಬಳಿ ಘಟನೆ ನಡೆದಿದೆ. ಅರೆಹಳ್ಳಿ ಗುಡ್ಡಹಳ್ಳಿ ನಿವಾಸಿ ಪೃಥ್ವಿರಾಜ್ (26) ಹಲ್ಲೆಗೆ ಒಳಗಾದ ಯುವಕ. ಕ್ಷುಲ್ಲಕ ಕಾರಣಕ್ಕೆ ಭಾನುವಾರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ನಿನ್ನೆ ಸಂಜೆ ಒಬ್ಬಂಟಿಯಾಗಿ ಸಿಕ್ಕ ಪೃಥ್ವಿರಾಜ್ ಮೇಲೆ ಕೋಳಿ ಅಂಗಡಿಯಲ್ಲಿ ಇದ್ದ ಚಿಕನ್ ಕಟ್ ಮಾಡುವ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ.
ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿರುವ ಪೃಥ್ವಿರಾಜ್ ನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಡಾಬಾ ಬಳಿ ನಡೆದ ಯುವಕನ ಕೊಲೆ ಪ್ರಕರಣ ಮಾಸುವ ಮೊದಲೇ ನಿನ್ನೆ ಸಂಜೆ ನಡೆದ ಹಲ್ಲೆ ಘಟನೆಯಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಸಿಕೊಂಡಿದ್ದಾರೆ.