ಬೆಂಗಳೂರು:- KEA ಪರೀಕ್ಷೆಯಲ್ಲಿನ ಅಕ್ರಮ ಎಸಗಿದ ಆರ್.ಡಿ. ಪಾಟೀಲಗೆ ಮತ್ತೆ ನ್ಯಾಯಾಂಗ ಬಂಧನ ನೀಡಲಾಗಿದೆ. ಕಳೆದ ಅಕ್ಟೋಬರ್ 28ರಂದು ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಅಫಜಲಪುರದ ಆರ್.ಡಿ. ಪಾಟೀಲ ಪೊಲೀಸ್ ಕಸ್ಟಡಿಯ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಲ್ಲಿನ ಪ್ರಧಾನ ಜೆಎಂಎಫ್ಸಿ ನ್ಯಾಯಾಲಯವು ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ ತನಿಖೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಮಾಹಿತಿ ಸಂಗ್ರಹಿಸಿದ ಬಳಿಕ ಗುರುವಾರ ಆರ್.ಡಿ. ಪಾಟೀಲನನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶ ಸಂತೋಷ ಶ್ರೀವಾಸ್ತವ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಇದುವರೆಗೆ ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ವಿಶ್ವವಿದ್ಯಾಲಯ ಠಾಣೆಯಲ್ಲಿ ದಾಖಲಾದ ಎಫ್ಐಆರ್ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಮತ್ತೆ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಎನ್ನಲಾಗಿದೆ.
ನ್ಯಾಯಾಧೀಶ ಸಂತೋಷ ಶ್ರೀವಾಸ್ತವ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಇದುವರೆಗೆ ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ವಿಶ್ವವಿದ್ಯಾಲಯ ಠಾಣೆಯಲ್ಲಿ ದಾಖಲಾದ ಎಫ್ಐಆರ್ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಮತ್ತೆ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಶುಕ್ರವಾರ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.