ಮಂಡ್ಯ: ಮುಂದಿನ ಒಂದು ತಿಂಗಳು ತಮಿಳುನಾಡಿಗೆ ನೀರು ಬಿಡುವಂತೆ ಸಿಡಬ್ಲ್ಯುಆರ್ಸಿ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸಲು ಶಿಫಾರಸ್ಸು ಮಾಡಿದ್ದು, ಇದಕ್ಕೆ ಮಂಡ್ಯದ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ.
Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ ಕಂಬಳ: ಹೇಗಿದೆ ಸಿದ್ಧತೆ!
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಸರ್ಕಾರ, ಪ್ರಾಧಿಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಲಾಗುತ್ತಿದೆ. ತಮಿಳುನಾಡಿಗೆ ನೀರು ಹರಿಸದಂತೆ ರೈತ ಹಿತರಕ್ಷಣಾ ಸಮಿತಿ ಕಳೆದ 80 ದಿನಗಳಿಂದ ರೈತರ ಹೋರಾಟ ನಡೆಯುತ್ತಿದೆ.