ಹಾವೇರಿ: ಅನುದಾನ ಕೊರತೆ ಹಿನ್ನಲೆ ಜಿಲ್ಲಾಸ್ಪತ್ರೆಯಲ್ಲಿ 30 ಡಿ ಗ್ರೂಪ್ ನೌಕರರು ಕೆಲಸದಿಂದ ತೆಗೆದು ಹಾಕಿದ್ದನ್ನೂ ಖಂಡಿಸಿ ಹಾವೇರಿ ಜಿಲ್ಲಾಸ್ಪತ್ರೆಯ ಮುಂದೆ ಡಿ ಗ್ರೂಪ್ ನೌಕರರು ಪ್ರತಿಭಟನೆಗೆ ಕುಳಿತಿದ್ದಾರೆ. ಕಳೆದ 15 ವರ್ಷಗಳಿಂದ ಕೆಲಸ ಮಾಡುತ್ತಿರೋ ಡಿ ಗ್ರೂಪ್ ನೌಕರರನ್ನೂ ಸರ್ಕಾರದಲ್ಲಿ ವೇತನ ಕೊಡಲು ಹಣ ಇಲ್ಲ ಎಂದು ಕೆಲಸದಿಂದ ವಜಾ ಮಾಡಿದ್ದಾರೆ ಎಂಡು ಸಿಬ್ಬಂದಿಗಳು ಆರೋಪಿಸಿದ್ದಾರೆ.
ಸುಮಾರು 10 ರಿಂದ 15 ವರ್ಷಗಳಿಂದ ಕೆಲಸ ಮಾಡುತ್ತಿರೋ ಡಿ ಗ್ರೂಪ್ ಸಿಬ್ಬಂದಿಗಳಿಗೆ ಈಗ ಕೆಲಸ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೋನಾ ಅವಧಿ ಸೇರಿದಂತೆ ಕಷ್ಟ ಕಾಲದಲ್ಲಿ ಕೆಲಸ ಮಾಡಿದ ಸಿಬ್ಬಂದಿಗೆ ಗೇಟ್ ಪಾಸ್ ನೀಡಲಾಗಿದ್ದು, ಇದ್ದರಿಂದ ಸರಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.