ಹುಬ್ಬಳ್ಳಿ: ಹುಬ್ಬಳ್ಳಿ ಸಮೀಪದ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು.
ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.