ತುಮಕೂರು:- ಸಿಬಿಐನಿಂದ ತನಿಖೆ ವಾಪಸ್ ಪಡೆದ ಸರ್ಕಾರ, ಜನರ ಮುಂದೆ ಬೆತ್ತಲಾಗಿದೆ ಎಂದು ಎ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲಿನ ಪ್ರಕರಣದ ತನಿಖೆಯನ್ನು ಸಿಬಿಐನಿಂದ ರಾಜ್ಯ ಸರ್ಕಾರ ವಾಪಸ್ ಪಡೆದು ಜನರ ಮುಂದೆ ಬೆತ್ತಲಾಗಿದೆ ಎಂದರು. ಒಮ್ಮೆ ಎಫ್ಐಆರ್ ದಾಖಲಿಸಿ, ದೋಷಾರೋಪಣೆ ಪಟ್ಟಿ ಸಲ್ಲಿಸಿದ ನಂತರ ಬದಲಾವಣೆ ಮಾಡಲು ನ್ಯಾಯಾಧೀಶರ ಅನುಮತಿ ಪಡೆಯಬೇಕು.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ನ್ಯಾಯಾಲಯದಲ್ಲಿ ಇರುವ ಪ್ರಕರಣದ ಬಗ್ಗೆ ನ್ಯಾಯಾಧೀಶರೇ ತೀರ್ಮಾನ ತೆಗೆದುಕೊಳ್ಳಬೇಕು. ವಾಪಸ್ ಪಡೆಯಲು ಸಚಿವ ಸಂಪುಟಕ್ಕೆ ಅಧಿಕಾರ ಇಲ್ಲ’ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ಕಾನೂನು, ನಿಯಮಗಳ ಬಗ್ಗೆ ಮಾತನಾಡುತ್ತಾರೆ. ಹಿಂದೆ ಸಿಬಿಐನವರು ಅನುಮತಿ ಕೇಳಿದ್ದು, ಸರ್ಕಾರ ಒಪ್ಪಿಗೆ ನೀಡಿತ್ತು. ಶಿವಕುಮಾರ್ ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ನಿರ್ದೋಷಿಯಾಗಿ ಹೊರ ಬಂದು ಜನರ ಮುಂದೆ ನಿಲ್ಲಬೇಕಿತ್ತು. ವಾಪಸ್ ತೆಗೆದುಕೊಂಡಿರುವುದನ್ನು ನೋಡಿದರೆ ನ್ಯಾಯಾಲಯಕ್ಕೆ ಸವಾಲ್ ಹಾಕಿದಂತಿದೆ ಎಂದು ತಿಳಿಸಿದರು.