ಬೆಂಗಳೂರು:– ಸಿಎಂ ಸಿದ್ದರಾಮಯ್ಯ ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟಾಂಗ್ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಜನರ ತೆರಿಗೆ ಖರ್ಚು ಮಾಡಿ ಜಾಹಿರಾತು ನೀಡ್ತಿದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು ಹೇಳುತ್ತಿದ್ದಾರೆ. ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು ಕುಮಾರಸ್ವಾಮಿ ಹೇಳಿದರು.