ಧಾರವಾಡ : ಜಮ್ಮು – ಕಾಶ್ಮೀರದಲ್ಲಿ ಉಗ್ರರೊಂದಿಗೆ ಹೋರಾಡಿ ವೀರ ಮರಣಹೊಂದಿದ ಯೋಧರಿಗೆ ಶ್ರದ್ಧಾಂಜಲಿ ಸಭೆಯನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿಯ ಕಾರ್ಗಿಲ್ ವಿಜಯ ಸ್ತೂಪದಲ್ಲಿ ಹಮ್ಮಿಕೊಳ್ಳಲಾಗಿತ್ತು .
ಉತ್ತರ ಕರ್ನಾಟಕ ಸೈನಿಕರ ಕಲ್ಯಾಣ ಸಮಿತಿ, ಮಾಜಿ ಸೈನಿಕರ ಬಳಗದ ಸದಸ್ಯರು ಹಾಗೂ ಸಾರ್ವಜನಿಕರು ಹುತಾತ್ಮ ಯೋಧರ ಭಾವಚಿತ್ರಕ್ಕೆ ಹಾಗೂ ಕಾರ್ಗಿಲ್ ವಿಜಯ ಸ್ತೂಪಕ್ಕೆ ಪುಷ್ಪ ನಮನ ಸಲ್ಲಿಸಿದರು.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ಶ್ರದ್ಧಾಂಜಲಿ ಸಭೆಯಲ್ಲಿ ಮಡಿದ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಂದು ನಿಮಿಷ ಮೌನ ಆಚರಿಸಿ, ಪೊಲೀಸ್ ವಾದ್ಯ ತುಕಡಿಗಳು ವಾದ್ಯ ನುಡಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.