ಬೆಂಗಳೂರು: ನಿಗಮ-ಮಂಡಳಿ ಪಟ್ಟಿ ಫೈನಲ್ ಮಾಡುವ ಸಂಬಂಧ ಮಂಗಳವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Surjewala) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
,ಮಧ್ಯಾಹ್ನ 2 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜೊತೆ ನಿಗಮ-ಮಂಡಳಿ ಕುರಿತು ಸಭೆ ನಡೆಸಲಿದ್ದಾರೆ. ಬಹುತೇಕ ನಾಳೆಯೇ ನಿಗಮ-ಮಂಡಳಿ ಪಟ್ಟಿ ಫೈನಲ್ ಆಗುವ ಸಾಧ್ಯತೆ ಇದೆ.
ನಾಳೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದು, ಶಾಸಕರಿಗೆ ಮೊದಲ ಪಟ್ಟಿಯಲ್ಲಿ ಅವಕಾಶ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾಸಕರ ಜೊತೆ ಕಾರ್ಯಕರ್ತರಿಗೂ ನೀಡುವ ಬಗ್ಗೆ ಚರ್ಚೆ ಆಗಲಿದೆ.ಈಗಾಗಲೇ ಮೊದಲ ಹಂತದ ಸಭೆಯನ್ನು ಸಿಎಂ, ಡಿಸಿಎಂ, ಸುರ್ಜೇವಾಲಾ ನಡೆಸಿದ್ದಾರೆ.