ಚಿನ್ನದ ಬೆಲೆ ಗ್ರಾಮ್ಗೆ 25 ರೂನಷ್ಟು ಏರಿಕೆ ಆಗಿದ್ದು, ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿಯ ವಿವರ ಇಲ್ಲಿದೆ ನೋಡಿ.
ಭಾರತ ಹಾಗೂ ವಿವಿಧ ದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ತೀವ್ರ ಏರಿಕೆ ಕಾಣತೊಡಗಿದೆ. ಅಮೆರಿಕದ ಆರ್ಥಿಕತೆಯ ವಿವಿಧ ಅಂಶಗಳು ಸದ್ಯದಲ್ಲೇ ಬಹಿರಂಗಗೊಳ್ಳಲಿದ್ದು, ಮುನ್ನೆಚ್ಚರಿಕೆಯಾಗಿ ಹೂಡಿಕೆದಾರರು ಚಿನ್ನದ ಮೇಲೆ ಹಣ ಇರಿಸಿದ್ದಾರೆ. ಒಂದು ವೇಳೆ ಅಮೆರಿಕದ ಹಣದುಬ್ಬರ ಗಣನೀಯವಾಗಿ ಇಳಿಕೆಯಾದರೆ ಅಲ್ಲಿ ಬಡ್ಡಿದರವನ್ನೂ ಇಳಿಸಬಹುದು. ಆಗ ಚಿನ್ನದ ಬೆಲೆ ಹೆಚ್ಚತೊಡಗಬಹುದು ಎಂಬ ನಿರೀಕ್ಷೆಯಲ್ಲಿ ಬಹಳ ಮಂದಿ ಈಗಿಂದಲೇ ಚಿನ್ನ ಖರೀದಿಸತೊಡಗಿದ್ದಾರೆ. ಇದರ ಪರಿಣಾಮ ಭಾರತೀಯ ಚಿನಿವಾರಪೇಟೆಯ ಮೇಲೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,625 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 762.50 ರೂ