ಶಿವಮೊಗ್ಗ: ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೇಂದ್ರ ಸರಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲ. ನಮ್ಮ ರಾಜ್ಯದ ಸಚಿವರು ದೆಹಲಿಗೆ ಹೋದ್ರೂ ಅಧಿಕಾರಿಗಳನ್ನು ಮಾತನಾಡಿಸಲು ಆಗಲ್ಲ. ಕೇಂದ್ರ ಸರಕಾರದಿಂದ ಹಣ ತರುವ ದಮ್ಮು ತಾಕತ್ ಇದೆಯಾ? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ನಿರ್ವಹಣೆ ಮಾಡುವುದಕ್ಕೆ ಸರಕಾರ ಕ್ರಮ ವಹಿಸಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಒಂದು ತಿಂಗಳ ನಂತರ ತೊಂದರೆ ಬರಬಹುದು. ಬಹಳ ಆಹಾಕಾರ ಆಗೋದು ನೀರಿಗೆ. ಮೇವಿಗೆ ಯಾವುದೇ ತೊಂದರೆ ಇಲ್ಲ ಎಂದರು.
https://ainlivenews.com/do-you-know-which-are-the-most-visited-websites-by-indians/
ಸದ್ಯ ಸೊರಬ ಪಟ್ಟಣಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಆಗ್ತಿದೆ. ಜಿಲ್ಲೆಯ 238 ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಆಗಬಹುದು ಎಂದು ಗುರುತಿಸಲಾಗಿದೆ. ಎಂದು ಅಭಿಪ್ರಾಯಪಟ್ಟರು. ರೈತರಿಗೆ ನೀಡುವ ವಿದ್ಯುತ್ ಪೂರೈಕೆ ಸಮಯದಲ್ಲಿ ವ್ಯತ್ಯಾಸ ಆಗಬಹುದು. ಖಜಾನೆಯಲ್ಲಿ ದುಡ್ಡಿಲ್ಲ, ರಾಜ್ಯದಲ್ಲಿ ವಿದ್ಯುತ್ ಇಲ್ಲ ಅಂತಾ ಬಿಜೆಪಿಯವರು ಅಪಪ್ರಚಾರ ಮಾಡಿದರು.
ಅಂತಹ ಸಮಸ್ಯೆ ಇಲ್ಲ. ಖಜಾನೆಯಲ್ಲಿ ದುಡ್ಡಿದೆ. ವಿದ್ಯುತ್ ಸಹ ಇದೆ ಎಂದು ಸ್ಪಷ್ಟಪಡಿಸಿದರು. ರೈತರಿಗೆ ವಿದ್ಯುತ್ 7 ಗಂಟೆ ಕೊಡುತ್ತಿದ್ದೇವೆ. ಅದನ್ನು ನಿರಂತರ ಕೊಡ್ತೇವೆ. ಕಳೆದ ತಿಂಗಳಿಂದ ವಿದ್ಯುತ್ ಬಳಕೆ ಸಹ ಶೇ.90 ರಷ್ಟು ಹೆಚ್ಚಾಗಿದೆ. ನಗರದಲ್ಲೂ ಲೋಡ್ ಶೆಡ್ಡಿಂಗ್ ಎಲ್ಲೂ ಮಾಡ್ತಿಲ್ಲ. ಅನವಶ್ಯಕ ಲೋಡ್ ಶೆಡ್ಡಿಂಗ್ ಮಾಡಿದ್ರೇ ಕ್ರಮ ಕೈಗೊಳ್ತೇವೆ ಎಂದು ಎಚ್ಚರಿಕೆ ನೀಡಿದರು.