ಧಾರವಾಡ : ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ಖಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಹನುಮಂತಗೌಡ ಕಲ್ಮನಿ, ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಅತಿಥಿ ಉಪನ್ಯಾಸಕರ ಕರ್ತವ್ಯವನ್ನೇ ಅವಲಂಬಿಸಿವೆ.
ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಈ ಉಪನ್ಯಾಸಕರ ಬದುಕು ಅತಂತ್ರವಾಗಿದೆ. ಅತಿಥಿ ಎಂಬ ಅನಿಷ್ಠ ಪದ್ಧತಿಗೆ ಮುಕ್ತಾಯ ಹಾಡಿ ಸೇವಾ ಭದ್ರತೆಯ ಜೊತೆಗೆ ಕಾಯಮಾತಿ ಮಾಡಬೇಕು. ಇಲ್ಲದೇ ಹೋದಲ್ಲಿ ಕಾಯಂ ಆಗಿ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Most Visited Websites: ಭಾರತೀಯರು ಅತಿ ಹೆಚ್ಚು ಭೇಟಿ ನೀಡಿದ ವೆಬ್ ಸೈಟ್ಗಳು ಯಾವುದು ಗೊತ್ತಾ?
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ವಿರೋಧ ಪಕ್ಷದಲ್ಲಿದ್ದಾಗ ಅತಿಥಿ ಉಪನ್ಯಾಸಕರ ನಿಯೋಗಕ್ಕೆ, ನಮ್ಮ ಸರ್ಕಾರ ಬಂದರೆ ನಿಮ್ಮ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಂತೆ ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ಪರಿಹಾರ ಒದಗಿಸಿ ನುಡಿದಂತೆ ನಡೆಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಡಾ. ಮಂಜುನಾಥ ಜಂಗವಾಡ, ಡಾ. ವಿನೋದ ಚಂದ ಪೀಟರ, ಪ್ರೊ.ವಿಜಯಲಕ್ಷ್ಮಿ ಜೋಶಿ, ಪ್ರೊ.ದಾನೇಶ್ವರಿ, ಡಾ. ವೀರಣ್ಣ ಹಳ್ಳಿಕೇರಿ, ಕೃಷ್ಣಾ ಬೆಂತೂರ ಸೇರಿದಂತೆ ನೂರಾರು ಅತಿಥಿ ಉಪನ್ಯಾಸಕರು ಇದ್ದರು.