ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಎಸಿ ಕಚೇರಿ ಎಸ್ಡಿಸಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.ಪಹಣಿ ಪತ್ರ ಮಾಡಿಕೊಡಲು ಲಂಚಕ್ಕೆ ಕೈಯೊಡ್ದಿದ್ದ ಎಸ್ ಡಿಸಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ.ಮಂಜುನಾಥ್ ಅಂಗಡಿ ಲೋಕಾಯುಕ್ತ(Lokayukta) ಬಲೆಗೆ ಬಿದ್ದ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್ ಡಿಸಿ(SDC),ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್.ಕೆ. ಗ್ರಾಮದ ರವಿ ಅಜ್ಜಿ ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು.
Bengaluru: ನಿವಾಸಿಗಳೇ, ಬೆಂಗಳೂರಿನಲ್ಲಿ ಆಸ್ತಿ ಹೊಂದಿದ್ದೀರಾ!? – ಇಲ್ಲಿದೆ ಗುಡ್ ನ್ಯೂಸ್
ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಈ ಸಂಬಂಧ ರವಿ ಅಜ್ಜಿ ಬೆಳಗಾವಿ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ,ಈ ವೇಳೆ ಮಂಜುನಾಥ್ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ SP ಹಣಮಂತರಾಯ, DYSP ಬಿ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ PSI ಅನ್ನಪೂರ್ಣ ಹುಲಗೂರ ನೇತೃತ್ವದ ತಂಡ ದಾಳಿ ನಡೆಸಿತ್ತು.