ಪೀಣ್ಯ ದಾಸರಹಳ್ಳಿ:’ ಕೀರ್ತನೆಗಳ ಮೂಲಕ ಸಮಾಜದ ಓರೆಕೋರೆಗಳನ್ನು ತಿದ್ದಿ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರಣೆ ನೀಡಿದ ಕನಕದಾಸರು ನಮ್ಮೆಲ್ಲರಿಗೆ ದಾರಿ ದೀಪ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.
ಶೆಟ್ಟಿಹಳ್ಳಿಯಲ್ಲಿ ಕ್ಷೇತ್ರದ ಬಿಜೆಪಿ ವತಿಯಿಂದ ಆಯೋಜಿಸಲಾದ ಕನಕದಾಸ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
‘ಕನಕದಾಸರ ಸಂದೇಶಗಳು ಎಲ್ಲಾ ಕಾಲಕ್ಕೂ ಮೌಲ್ಯಯುತವಾದ ಸಂದೇಶ. ಯಾವುದೇ ಒಂದು ಜಾತಿ, ಮತ, ಪ್ರದೇಶ, ಭಾಷೆಗೆ ಸೀಮಿತವಾಗದ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳನ್ನು ನಾವೆಂದು ಮರೆಯಬಾರದು’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪಿ.ಎಚ್. ರಾಜು, ವಿನೋದ್ ಗೌಡ, ಬಿಜೆಪಿ ಮುಖಂಡರಾದ ಸುರೇಶ್ ಕೆಂಪೇಗೌಡ, ರಘು, ಕಣ್ಣಪ್ಪ ,ಮಂಜು ಭಾಷಣಿ ಹಾಗೂ ಸ್ಥಳೀಯ ಮುಖಂಡರು ಇದ್ದರು.