ರಾಯ್ಪುರ: ಆಸ್ಟ್ರೇಲಿಯಾ (Australia) ವಿರುದ್ಧ ಟಿ20 ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ (Team India) ಯುವ ಪಡೆ, ಶುಕ್ರವಾರ (ಇಂದು) 4ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದೆ.
5 ಪಂದ್ಯದ ಸರಣಿಯಲ್ಲಿ 2-1ರಲ್ಲಿ ಮುನ್ನಡೆ ಸಾಧಿಸಿರುವ ಭಾರತ, ಕೊನೆಯ ಪಂದ್ಯದವರೆಗೂ ಕಾಯದೆ ಸರಣಿ ಗೆಲ್ಲಲು ಎದುರು ನೋಡುತ್ತಿದ್ದರೆ, ಆಸೀಸ್ ಸರಣಿ ಸಮಬಲದ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ
ಮೊದಲೆರಡು ಪಂದ್ಯ ಗೆದ್ದಿದ್ದ ಭಾರತ 3ನೇ ಟಿ20 ಪಂದ್ಯವನ್ನು ಪಂದ್ಯವನ್ನು ಮ್ಯಾಕ್ಸ್ವೆಲ್ ಅವರ ಸಾಹಸದ ಮುಂದೆ ಕೈಚೆಲ್ಲಿತ್ತು. ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಬೌಲರ್ಗಳ (Bowlers) ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. ಆಸೀಸ್ ವಿರುದ್ಧ ಕ್ರಮವಾಗಿ 209, 191 ಹಾಗೂ 225 ರನ್ ಬಿಟ್ಟುಕೊಟ್ಟಿತು. ಆದ್ದರಿಂದ ಟೀಂ ಇಂಡಿಯಾಕ್ಕೆ ಬ್ಯಾಟಿಂಗ್ನಷ್ಟೇ ಬೌಲಿಂಗ್ನಲ್ಲೂ ಬಲ ಬೇಕಿದೆ
ಪ್ರಸಿದ್ ಕೃಷ್ಣ ಗಾಯದಿಂದ ಚೇತರಿಸಿ ತಂಡಕ್ಕೆ ಮರಳಿದ ಬಳಿಕ ದುಬಾರಿಯಾಗುತ್ತಿದ್ದು, ಇತರರಿಂದಲೂ ಆಸೀಸ್ ಬ್ಯಾಟರ್ಗಳನ್ನು ಕಟ್ಟಿಹಾಕಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ 4ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ತಿಲಕ್ ವರ್ಮಾ ಅವರ ಜಾಗಕ್ಕೆ ಶ್ರೇಯಸ್ ಹಾಗೂ ಪ್ರಸಿದ್ಧ್ ಕೃಷ್ಣ ಬದಲಿಗೆ ದೀಪಕ್ ಚಹಾರ್ ಅವರನ್ನ ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಾಗಿವೆ.