ಪೃಥ್ವಿರಾಜ್ ಸುಕುಮಾರನ್ (Pruthviraj Sukumaran) ಅಭಿನಯದ ದಿ ಗೋಟ್ ಲೈಫ್ (The Goat Life), ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್ ಆಗಿದೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದು ರಾಷ್ಟ ಪ್ರಶಸ್ತಿ ವಿಜೇತ ಬ್ಲೆಸ್ಸಿ (Blessy)ನಿರ್ದೇಶನದ ಸಿನಿಮಾ.
ದಿ ಗೋಟ್ ಲೈಫ್ ಚಿತ್ರದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.
ಬ್ಲೆಸ್ಸಿ ನಿರ್ದೇಶನದ ಈ ಸಿನಿಮಾವನ್ಬು ವಿಷುಯಲ್ ರೊಮ್ಯಾನ್ಸ್ ನಿರ್ಮಿಸಿದೆ. ಈ ಚಿತ್ರದಲ್ಲಿ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಪ್ರಸಿದ್ಧ ಅರಬ್ ನಟರಾದ ತಾಲಿಬ್ ಅಲ್ ಬಲೂಶಿ ಮತ್ತು ರಿಕಾಬಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೋಟ್ ಲೈಫ್ ಅಕಾಡೆಮಿ ಪ್ರಶಸ್ತಿ ವಿಜೇತರಾದ ಎ.ಆರ್.ರೆಹಮಾನ್ ಮತ್ತು ರೆಸುಲ್ ಪೂಕುಟ್ಟಿ ಅವರ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವಿದೆ.