ಬೆಂಗಳೂರು: ಸಿಲಿಕಾನ್ ಸಿಟಿಯ 15 ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ.ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಇ-ಮೇಲ್ ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ ಎಂಡು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ ಎಂದು ತಿಳಿದು ನಾನು ನನ್ನ ಮನೆಯ ಹತ್ತಿರ ಇರುವ ಶಾಲೆಗೆ ಬಂದಿದ್ದೇನೆ. ಪೊಲೀಸ್ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ” ಎಂದರು. ”ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಅಂತಹ ಸಂದರ್ಭದಲ್ಲಿ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಹಿಂದೆಯೂ ಹೀಗೆ ಹುಸಿ ಕರೆ ಬಂದಿತ್ತು .ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ಪೊಲೀಸರು ನಿಗಾ ವಹಿಸಲಿದ್ದಾರೆ ಎಂದು ಹೇಳಿದರು.